Complete Solutions to exam of chapter ತ್ರಿಕೋನಮಿತಿಯ ಕೆಲವು ಅನ್ವಯಗಳು of Class 10 book with complete answers and questions

Class 10MATHS
Chapterತ್ರಿಕೋನಮಿತಿಯ ಕೆಲವು ಅನ್ವಯಗಳು
CAMBRIDGE PUBLICATION(KANNAD)exam
Number Of Questions14
Academic Year2023-24
  1. ಒಬ್ಬ ಸರ್ಕಸಿನ ಕಲಾವಿದನು, ನೇರ ಸ್ತಂಭದಿಂದ ಹಿಗ್ಗಿಸಿ ನೆಲಕ್ಕೆ ಕಟ್ಟಿರುವ 20 m ಉದ್ದದ ಹಗ್ಗದ ಮೇಲೆ ಹತ್ತುತ್ತಿದ್ದಾನೆ. ನೆಲದೊಂದಿಗೆ ಹಗ್ಗದ ನಡುವಿನ ಕೋನವು `30^o` ಆದರೆ, ಸ್ತಂಭದ ಎತ್ತರವನ್ನು ಕಂಡುಹಿಡಿಯಿರಿ (ಚಿತ್ರ 12cdot11 ನೋಡಿ)


    View Solution
  2. ಬಿರುಗಾಳಿಗೆ ಸಿಕ್ಕಿ ಒಂದು ಮರವು ಮುರಿದು, ನೆಲಕ್ಕೆ ತಾಗಿದಾಗ ನೆಲದೊಂದಿಗೆ `30^o` ಕೋನವನ್ನು ಉಂಟುಮಾಡಿದೆ ಮತ್ತು ಮರದ ತುದಿಯು ಮರದ ಬುಡದಿಂದ 8 m ದೂರದಲ್ಲಿ ನೆಲಕ್ಕೆ ತಾಗಿದೆ. ಹಾಗಾದರೆ ಮುರಿದು ಬೀಳುವ ಮುನ್ನ ಮರದ ಎತ್ತರ ಎಷ್ಟಿತ್ತೆಂದು ಕಂಡುಹಿಡಿಯಿರಿ


    View Solution
  3. ಗುತ್ತಿಗೆದಾರರೊಬ್ಬರು ಉದ್ಯಾನವನದಲ್ಲಿ ಮಕ್ಕಳಿಗಾಗಿ ಎರಡು ಜಾರುಬಂಡೆಗಳನ್ನು ಸ್ಥಾಪಿಸಲು ಯೋಜಿಸುತ್ತಾರೆ. 5 ವರ್ಷದ ಕೆಳಗಿನ ಮಕ್ಕಳಿಗೆ ಇಳಿಜಾರು ಸುಮಾರು `1cdot5`m ಎತ್ತರ ಮತ್ತು ನೆಲಕ್ಕೆ` 30^o` ಓರೆ ಕೋನ ಉಂಟಾಗುವಂತೆ ಹಾಗೂ ಹಿರಿಯ ಮಕ್ಕಳಿಗೆ ಜಾರುಬಂಡೆ ಸುಮಾರು 3m ಎತ್ತರ ಹಾಗೂ ನೆಲಕ್ಕೆ `60^o` ಓರೆಯಾಗಿರುವಂತೆ ಸ್ಥಾಪಿಸಲು ಇಷ್ಟಪಡುತ್ತಾರೆ. ಹಾಗಾದರೆ ಈ ಎರಡೂ ಸಂದರ್ಭಗಳಲ್ಲಿ ಜಾರುಬಂಡೆಯ ಉದ್ದವೆಷ್ಟು?


    View Solution
  4. ಗೋಪುರದ ಪಾದದಿಂದ 30m ದೂರದ ನೆಲದ ಮೇಲಿನ ಒಂದು ಬಿಂದುವಿನಿಂದ ಗೋಪುರದ ತುದಿಯನ್ನು ನೋಡಿದಾಗ ಉಂಟಾಗುವ ಉನ್ನತ ಕೋನವು 30 ° ಆದರೆ ,ಗೋಪುರದ ಎತ್ತರವನ್ನು ಕಂಡುಹಿಡಿಯಿರಿ .


    View Solution
  5. ಗಾಳಿಪಟವೊಂದು ನೆಲದ ಮೇಲಿನಿಂದ 60m ಎತ್ತರದಲ್ಲಿ ಹಾರಾಡುತ್ತಿದೆ . ಇದಕ್ಕೆ ಕಟ್ಟಲಾದ ದಾರವನ್ನು ತಾತ್ಕಲಿಕವಾಗಿ ನೆಲದ ಮೇಲಿನ ಒಂದು ಬಿಂದುವಿನಲ್ಲಿ ಗೂಟಕ್ಕೆ ಕಟ್ಟಿದೆ . ದಾರವು ನೆಲದೊಂದಿಗೆ 60 ° ಯ ಕೋನವನ್ನು ಉಂಟುಮಾಡಿದೆ ದಾರವು ಸಡಿಲವಾಗಿಲ್ಲವೆಂದು ಭಾವಿಸಿ ದಾರದ ಉದ್ದವನ್ನು ಕಂಡು ಹಿಡಿಯಿರಿ .


    View Solution
  6. 1.5 m ಎತ್ತರದ ಹುಡುಗನೊಬ್ಬ 30 m ಎತ್ತರದ ಕಟ್ಟಡದಿಂದ ಸ್ವಲ್ಪ ದೂರದಲ್ಲಿ ನಿಂತಿದ್ದಾನೆ . ಕಟ್ಟಡದ ಹತ್ತಿರಕ್ಕೆ ನಡೆದು ಹೋಗುವಾಗ ಕಟ್ಟಡದ ಮೇಲ್ತುದಿಗೆ ಅವನ ಕಣ್ಣಿನಿಂದ ಉಂಟಾದ ಉನ್ನತ ಕೋನವು `30^@` ಯಿಂದ 60 ° ಗೆ ಹೆಚ್ಚುತ್ತದೆ . ಹಾಗಾದರೆ ಅವನು ಕಟ್ಟಡದ ಕಡೆಗೆ ಎಷ್ಟು ದೂರ ನಡೆದು ಬಂದಿದ್ದಾನೆ .


    View Solution
  7. 20m ಎತ್ತರದ ಕಟ್ಟಡವೊಂದರ ಮೇಲೆ ಸ್ಥಾಪಿಸಲಾದ ಪ್ರಸರಣೆಯ ಗೋಪುರವೊಂದರ (transmission tower) ಮೇಲ್ತುದಿ ಮತ್ತು ಪಾದಗಳ ನೆಲದ ಮೇಲಿನ ಒಂದು ಬಿಂದುವಿನಿಂದ ನೋಡಿದಾಗ ಉನ್ನತ ಕೋನಗಳು ಕ್ರಮವಾಗಿ `60^o` ಮತ್ತು `45^o` ಇದೆ. ಪ್ರಸರಣೆಯ ಗೋಪುರದ ಎತ್ತರ ಕಂಡುಹಿಡಿಯಿರಿ.


    View Solution
  8. `1cdot6m` ಎತ್ತರದ ಪ್ರತಿಮೆಯೊಂದನ್ನು ಒಂದು ಪೀಠದ ಮೇಲ್ಭಾಗದಲ್ಲಿ ಇರಿಸಲಾಗಿದೆ. ನೆಲದ ಮೇಲಿನ ಒಂದು ಬಿಂದುವಿನಿಂದ ಪ್ರತಿಮೆಯ ಮೇಲ್ತುದಿಯ ಉನ್ನತ ಕೋನವು `60^o` ಮತ್ತು ಅದೇ ಬಿಂದುವಿನಿಂದ ಪೀಠದ ಮೇಲ್ತುದಿಯ ಉನ್ನತ ಕೋನವು `45^o` ಆಗಿದೆ. ಪೀಠದ ಎತ್ತರವನ್ನು ಕಂಡುಹಿಡಿಯಿರಿ.


    View Solution
  9. ಗೋಪುರದ ಪಾದದಿಂದ ಕಟ್ಟಡವೊಂದರ ಮೇಲ್ತುದಿಯನ್ನು ನೋಡಿದಾಗ ಉನ್ನತ ಕೋನವು 30 ° ಮತ್ತು ಕಟ್ಟಡದ ಪಾದದಿಂದ ಗೋಮರದ ಮೇಲ್ತುದಿಗೆ ಉನ್ನತ ಕೋನವು 60 ° . ಇದೆ ಗೋಪುರದ ಎತ್ತರ 50 m ಇದ್ದರೆ , ಕಟ್ಟಡದ ಎತ್ತರ ಕಂಡುಹಿಡಿಯಿರಿ .


    View Solution
  10. 80 ಅಡಿ ಅಗಲವುಳ್ಳ ರಸ್ತೆಯ ಎರಡು ಬದಿಗಳಲ್ಲಿ ಒಂದೇ ಎತ್ತರವಿರುವ 2 ಕಂಬಗಳು ಅಭಿಮುಖವಾಗಿ ನಿಂತಿವೆ . ರಸ್ತೆಯ ಮೇಲಿನ ಒಂದು ಬಿಂದುವಿನಿಂದ , ಕಂಬದ ಮೇಲ್ತುದಿಗಳ ಉನ್ನತ ಕೋನಗಳು ಕ್ರಮವಾಗಿ 60 ° ಮತ್ತು 30 , ಆಗಿದೆ . ಕಂಬಗಳ ಎತ್ತರವನ್ನು ಮತ್ತು ಕಂಬಗಳಿಂದ ರಸ್ತೆಯ ಮೇಲಿನ ಬಿಂದುವಿಗಿರುವ ದೂರವನ್ನು ಕಂಡುಹಿಡಿಯಿರಿ .


    View Solution
  11. ಒಂದು ಕಾಲುವೆಯ ದಡದ ಮೇಲೆ ದೂರದರ್ಶನದ ಗೋಪುರವೊಂದು ನೇರವಾಗಿ ನಿಂತಿದೆ . ಗೋಪುರಕ್ಕೆ ಅಭಿಮುಖವಾದ ಮತ್ತೊಂದು ದಡದ ಮೇಲಿನ ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನವು `60^@` ಆಗಿದೆ . ಇದೇ ಬಿಂದುವಿನಿಂದ ಗೋಪುರದ ಪಾದವನ್ನು ಸೇರಿಸುವಂತೆ ಎಳೆದ ಸರಳರೇಖೆಯ ಮೇಲಿನ 20 ದೂರದ ಮತ್ತೊಂದು ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೊನವು 30 ° ಆಗಿದೆ . ಗೋಪುರದ ಎತ್ತರವನ್ನು ಮತ್ತು ಕಾಲುವೆಯ ಅಗಲವನ್ನು ಕಂಡುಹಿಡಿಯಿರಿ .


    View Solution
  12. 7m ಎತ್ತರದ ಕಟ್ಟಡಮೇಲಿನ ಒಂದು ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನವು `60^o` ಮತ್ತು ಅದರ ಪಾದಕ್ಕೆ ಅವನತ ಕೋನವು `45^o` ಆಗಿದೆ. ಗೋಪುರದ ಎತ್ತರ ಕಂಡುಹಿಡಿಯಿರಿ.


    View Solution
  13. ಸಮುದ್ರ ಮಟ್ಟದಿಂದ 75m ಎತ್ತರದಲ್ಲಿರುವ ದೀಪಸ್ತಂಭವೊಂದರ ಮೇಲಿನಿಂದ ಎರಡು ಹಡಗುಗಳನ್ನು ನೋಡಿದಾಗ ಉಂಟಾದ ಅವನತ ಕೋನಗಳು ಕ್ರಮವಾಗಿ 30 ° ಮತ್ತು 45 ° ಆಗಿದೆ , ದೀಪಸ್ತಂಭದ ಒಂದೇ ಪಾರ್ಶ್ವದಲ್ಲಿ ಒಂದು ಹಡಗಿನ ಹಿಂದೆ ಮತ್ತೊಂದಿದ್ದರೆ ಎರಡು ಹಡಗುಗಳಿಗಿರುವ ದೂರವನ್ನು ಕಂಡುಹಿಡಿಯಿರಿ .


    View Solution
  14. ಗೋಪುರವೊಂದರ ಪಾದದಿಂದ 4m ಮತ್ತು 9m ದೂರದಲ್ಲಿ ಒಂದೇ ಸರಳರೇಖೆಯ ಮೇಲಿನ ಬಿಂದುಗಳ ಮೇಲಿನ ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನಗಳು ಪರಸ್ಪರ ಪೂರಕಗಳಾಗಿವೆ. ಗೋಪುರದ ಎತ್ತರವು 6m ಎಂದು ಸಾಧಿಸಿ.


    View Solution

exam questions and complete solutions for chapter ತ್ರಿಕೋನಮಿತಿಯ ಕೆಲವು ಅನ್ವಯಗಳು of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS ತ್ರಿಕೋನಮಿತಿಯ ಕೆಲವು ಅನ್ವಯಗಳು