Class 10 | MATHS |
Chapter | ಮೇಲ್ಮೈ ವಿಸ್ತೀರ್ಣಗಳು ಮತ್ತು ಘನಫಲಗಳು |
CAMBRIDGE PUBLICATION(KANNAD) | exam |
Number Of Questions | 30 |
Academic Year | 2023-24 |
64 `cm^3` ಘನಫಲವನ್ನು ಹೊಂದಿರುವ 2 ವರ್ಗ ಘನಗಳ ಮುಖಗಳನ್ನು ಸೇರಿಸಿ ಒಂದು ಆಯತ ಘನಾಕೃತಿ ಮಾಡಿದೆ . ಈ ಆಯತ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ .
ಒಂದು ಪಾತ್ರೆಯ ಆಕಾರವು ಟೊಳ್ಳಾದ ಸಿಲಿಂಡರಿನ' ಒಂದು ಪಾದದ ಮೇಲೆ ಟೊಳ್ಳಾದ ಅರ್ಧಗೋಳಾಕೃತಿಯನ್ನು ಕೂಡಿಸಿ ಮಾಡಿದೆ. ಅರ್ಧಗೋಳದ ವ್ಯಾಸವು 14 cm ಮತ್ತು ಪಾತ್ರೆಯ ಓಟ್ಟು ಎತ್ತರವು 13cm ಇದೆ. ಈ ಪಾತ್ರೆಯ ಒಳ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
ಒಂದು ಅರ್ಧಗೋಳದ ಮೇಲೆ ಅದೇ ತ್ರಿಜ್ಯವನ್ನು ಹೊಂದಿರುವ ಒಂದು ಶಂಕುವನ್ನು ಕೂಡಿಸಿ ಒಂದು ಆಟಿಕೆಯನ್ನು ಮಾಡಿದೆ. ಅವೇರಡರ ವೃತ್ತಾಕಾರದ ಪಾದದ ತ್ರಿಜ್ಯವು 3.5 cm ಆಗಿದೆ. ಆಟಿಕೆಯ ಒಟ್ಟು ಎತ್ತರವು 15.5 cm ಆದರೆ ಆಟಿಕೆಯ ಒಟ್ಟು ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
ಪ್ರತಿ ಅಂಚು 7 cm ಹೊಂದಿರುವ ವರ್ಗ ಘನಾಕೃತಿಯ ಒಂದು ವಸ್ತುವಿನ ಮೇಲ್ಮುಖದ ಮೇಲೆ ಅರ್ಧಗೋಳವು ಇರಿಸಿದೆ. ಅರ್ಧಗೋಳದ ಗರಿಷ್ಠ ವ್ಯಾಸವನ್ನು ಕಂಡುಹಿಡಿಯಿರಿ? ಈ ಪೂರ್ಣ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
ವರ್ಗ ಘನಾಕೃತಿಯ ಮರದ ವಸ್ತುವಿನ ಒಂದು ಮುಖದ ಒಳಭಾಗವು ತಗ್ಗಾಗುವಂತೆ ಅರ್ಧಗೋಳವನ್ನು ಕೊರೆಯಲಾಗಿದೆ. ವರ್ಗ ಘನದ ಅಂಚಿನ ಉದ್ದವು ಅರ್ಧಗೋಳದ ವ್ಯಾಸ L ಗೆ ಸಮನಾಗಿದ್ದರೆ, ನೂತನವಾಗಿ ಉಂಟಾದ ಘನದ ಒಟ್ಟು ಮೇಲ್ಮೆ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
ಒಂದು ಔಷದದ ಕ್ಯಾಪುಲ್‌ನ ಆಕಾರವು. ಒಂದು ಸಿಲಿಂಡರಿನ ಪ್ರತಿ ಪಾದಗಳಲ್ಲಿ ಎರಡು ಅರ್ಧಗೋಳವನ್ನು ಅಂಟಿನದೆ. ಕ್ಯಾಪ್ಸುಲ್‌ನ ಸಂಪೂರ್ಣ ಉದ್ದವು 14 mm ಮತ್ತು ಅದರ ವ್ಯಾಸವು 5mm ಇದೆ. ಅದರ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
ಸಿಲಿಂಡರಿನ ವೃತ್ತಾಕಾರದ ಪಾದವನ್ನು ಶಂಕುವು. ಸಂಪೂರ್ಣವಾಗಿ ಆವರಿಸುವಂತೆ ಒಂದು ಡೇರೆಯು ಇದೆ. ಸಿಲಿಂಡರಿನ ಎತ್ತರ ಮತ್ತು ವ್ಯಾಸವು 2.1 m ಮತ್ತು 4 m ಕ್ರಮವಾಗಿ ಇದೆ ಮತ್ತು ಶಂಕುವಿನ ಓರೆ ಎತ್ತರ 2.8m ಆದರೆ, ಡೇರೆಯನ್ನು ನಿರ್ಮಿಸಲು ಬಳಸಿದ ತಾಡಪತ್ರಿ (canvas) ಯ ವಿಸ್ತೀರ್ಣವನ್ನು ಕಂಡುಹಿಡಿಯಿರಿ. ಹಾಗೆಯೇ, ತಾಡಪತ್ರಿಯ ದರವು Rs.500 ಪ್ರತಿ ಚದರ ಮೀಟರ್‌ಗೆ ಆದರೆ, ತಾಡಪತ್ರಿಯನ್ನು ಕೊಳ್ಳಲು ಬೇಕಾಗುವ ಹಣವೆಷ್ಟು? (ಡೇರೆಯ ಪಾದವನ್ನುತಾಡಪತ್ರಿಯಿಂದ ಹಾಸಿರುವುದಿಲ್ಲ ಎಂಬುದನ್ನುಗಮನಿಸಿ).
ಒಂದು ಘನ ಸಿಲಿಂಡರಿನ ಎತ್ತರ 2.4 cm ಮತ್ತು ವ್ಯಾಸ 1.4 cm ಅದೆ. ಇದರಿಂದ ಒಂದೇ ಎತ್ತರ ಮತ್ತು ಒಂದೇ ವ್ಯಾಸವನ್ನು ಹೊಂದಿರುವ ಶಂಕುವಿನಾಕಾರದ ಹಳ್ಳವನ್ನು ಕೊರೆದು ಟೊಳ್ಳಗಿಸಿದೆ. ನೂತನ ಘನದ ಒಟ್ಟು ಮೇಲ್ಮೈ ವಿಸ್ತೀರ್ಣವನ್ನು ಅತ್ಯಂತ ಸಮೀಪದ ಬೆಲೆಗೆ `cm^(2)` ನಲ್ಲಿ ಕಂಡುಹಿಡಿಯಿರಿ
ಮರದಿಂದ ಮಾಡಿದ ಸಿಲಿಂಡರಿನ ಎರಡು ವೃತ್ತಾಕಾರದ ಅರ್ಧಗೋಳವನ್ನು ಚಿತ್ರ ತೋರಿಸಿದಂತೆ ಕೊರೆದು ಒಂದು ವಸ್ತುವನ್ನು ತಯಾರಿಸಿದೆ . ಸಿಲಿಂಡರಿನ ಎತ್ತರ 10 cm ಮತ್ತು ಅದರ ಪಾದದ ತ್ರಿಜ್ಯ 3.5cm ಆದರೆ , ವಸ್ತುವಿನ ಒಟ್ಟು ವಿಸ್ತೀರ್ಣವನ್ನು ಕಂಡು ಹಿಡಿಯಿರಿ .
(ಬೆಲೆಯನ್ನು ನೀಡುವ ತನಕ `pi =22/7` ಎಂದು ಪರಿಗಣಿಸಿ) ಒಂದು ಘನದಲ್ಲಿ ಅರ್ಧಗೋಳದ ವೃತ್ತಾಕಾರದ ಪಾದದ ಮೇಲೆ ಸಂಪೂರ್ಣವಾಗಿ ಆವರಿಸುವಂತೆ ಶಂಕುವು ನಿಂತಿದೆ. ಅವುಗಳ ತ್ರಿಜ್ಯಗಳು 1 cm ಮತ್ತು ಶಂಕುವಿನ ಎತ್ತರವು ಅದರ ತ್ರಿಜ್ಯಕ್ಕೆ ಸಮನಾಗಿದೆ. ಈ ಘನದ ಘನಫಲವನ್ನು `pi` ಯಲ್ಲಿ ವ್ಯಕ್ತಪಡಿಸಿರಿ.
ರೇಚಲ್ ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿನಿ. ಅವರು ತೆಳುವಾದ ಅಲ್ಯುಮಿನಿಯಂ ಹಾಳೆಯಿಂದ ಸಿಲಿಂಡರಿನ ಎರಡು ವೃತ್ತ ಪಾದಗಳಲ್ಲಿ ಶಂಕುವನ್ನು ಜೋಡಿಸಿ ಒಂದು ಮಾದರಿಯನ್ನು ತಯಾರು ಮಾಡಬೇಕಾಗಿದೆ. ಈ ಮಾದರಿಯ ವ್ಯಾಸವು 3 cm ಮತ್ತು ಅದರ ಒಟ್ಟಾರೆ ಉದ್ದವು 12 cm ಇದೆ. ಶಂಕುವಿನ ಎತ್ತರವು 2 cm ಆದರೆ ರೆಚೇಲ್ ಮಾಡಿದ ಈ ಮಾದರಿಯೊಳಗಿನ ಗಾಳಿಯ ಗಾತ್ರವನ್ನು ಕಂಡುಹಿಡಿಯಿರಿ. (ಮಾದರಿಯ ಹೊರ ಹಾಗೂ ಒಳ ಮೇಲೆ ೈ ಅಳತೆಗಳು ಸರಿಸುಮಾರಾಗಿ ಒಂದೇ ಆಗಿದೆ ಎಂದು ಭಾವಿಸಿಕೊಳ್ಳಿ)
ಒಂದು ಗುಲಾಬ್ ಜ್ಯಾಮೂನ್‌ನಲ್ಲಿ ಅದರ ಘನಫಲದ ಶೇ 30 ರಷ್ಟು ಸಕ್ಕರೆಯ ಪಾಕವನ್ನು ಒಳಗೊಂಡಿದೆ . ಪ್ರತಿ ಗುಲಾಬ್ ಜ್ಯಾಮೂನು ಸಿಲಿಂಡರ್ ಆಕಾರದಲ್ಲಿ ಇದ್ದು , ಅದರ ಎರಡು ಅಂತ್ಯ ಭಾಗದಲ್ಲಿ ಅರ್ಧಗೋಳಗಳಿವೆ . ಗುಲಾಬ್ ಜಾಮೂನಿನ ಒಟ್ಟಾರೆ ಉದ್ದ 5cm ಮತ್ತು ವ್ಯಾಸವು 2.8cm ಆದರೆ , 45 , ಗುಲಾಬ್ ಜ್ಯಾಮೂನ್‌ನಲ್ಲಿ ಇರುವ ಸಕ್ಕರೆ ಪಾಕವನ್ನು ಕಂಡುಹಿಡಿಯಿರಿ .
ಆಯತ ಘನಾಕೃತಿತಯ ಆಕಾರದ ಮರದ ಲೇಖನಿಧಾರಕ ( penstand ) ದಲ್ಲಿ ಲೇಖನಿಗಳನ್ನು ಇಡಲು ಶಂಕುವಿನಾಕಾರದ ನಾಲ್ಕು ತಗ್ಗುಗಳನ್ನು ಕೊರೆದಿದೆ. ಆಯತ ಘನಾಕೃತಿಯ ಅಳತೆಯು 15cm `xx` 10cm `xx` 3.5cm ಆಗಿದೆ . ಪ್ರತಿ ಶಂಕುವಿನಾಕಾರದ ಹಳ್ಳದ ತ್ರಿಜ್ಯವು 0.5cm ಮತ್ತು ಆಳವು 1.4cm ಇದೆ . ಲೇಖನಿಧಾರಕದಲ್ಲಿನ ಮರದ ಗಾತ್ರವನ್ನು ಕಂಡುಹಿಡಿಯಿರಿ .
ಒ೦ದು ಪಾತ್ರೆಯು ತಲೆಕೆಳಗಾದ ಶಂಕುವಿನಾಕಾರದಲ್ಲಿದೆ. ಅದರ ಎತ್ತರ 8 cm ಮತ್ತು ತೆರೆದ ಮೇಲ್ಭಾಗದ ತ್ರಿಜ್ಯವು 5 cm ಇದೆ. ಅದರ ಅಂಚಿನವರೆಗೆ ಪೂರ್ಣವಾಗಿ ನೀರನ್ನು ತುಂಬಿದೆ. ಅದರಲ್ಲಿ 0.5 cm ತ್ರಿಜ್ಯವಿರುವ ಸೀಸದ ಗೋಳಗಳನ್ನು ಪಾತ್ರೆಯಲ್ಲಿ ಹಾಕಿದಾಗ, ನಾಲ್ಕನೆಯ ಒಂದು ಭಾಗದಷ್ಟು ನೀರು ಹೊರ ಚಲ್ಲುತ್ತದೆ. ಪಾತ್ರೆಯಲ್ಲಿ ಹಾಕಿದ ಸೀಸದ ಗೋಳಗಳೆಷ್ಟು?
ಒಂದು ಕಬ್ಬಿಣದ ಕಂಬದ ಎತ್ತರವು 220 cm ಮತ್ತು ಅದರ ಪಾದದ ವ್ಯಾಸವು 24 cm ಆಗಿರುವ ಘನ ಸಿಲಿಂಡರಿನಾಕಾರದಲ್ಲಿ ಇದೆ. ಇದರ ಮೇಲೆ 60 cm ಎತ್ತರ ಮತ್ತು ತ್ರಿಜ್ಯ 8 cm ಇರುವ ಮತ್ತೊಂದು ಸಿಲಿಂಡರ್ ಜೋಡಿಸಲಾಗಿದೆ. `1 cm^(3)` ಕಬ್ಬಿಣದ ಸರಿಸುಮಾರು ದ್ರವ್ಯರಾಶಿಯು 8g ಆದರೆ ಕಂಬದ ದ್ರವ್ಯರಾಶಿಯನ್ನು ಕಂಡುಹಿಡಿಯಿರಿ. (`pi`= 3.14 ಎಂದು ತೆಗೆದುಕೊಳ್ಳಿ).
60cm ತ್ರಿಜ್ಯವಿರುವ ಅರ್ಧಗೋಳದ ಪಾದದ ಮೇಲೆ 120cm ಎತ್ತರ ಮತ್ತು 60cm ತ್ರಿಜ್ಯವನ್ನು ಹೊಂದಿರುವ ನೇರ ವೃತ್ತ ಪಾದ ಶಂಕುವನ್ನು ಜೋಡಿಸಲಾಗಿದೆ . ಸಂಪೂರ್ಣವಾಗಿ ನೀರಿನಿಂದ ತುಂಬಿದ ನೇರ ವೃತ್ತ ಪಾದ ಸಿಲಿಂಡರಿನಲ್ಲಿ ತಳವನ್ನು ಮುಟ್ಟುವಂತೆ ನೇರವಾಗಿ ಈ ಘನಾಕೃತಿಯನ್ನು ಮುಳುಗಿಸಲಾಗಿದೆ . ಸಿಲಿಂಡರಿನ ತ್ರಿಜ್ಯವು 60cm ಮತ್ತು ಎತ್ತರವು 180cm ಆದರೆ ಸಿಲಿಂಡರಿನಲ್ಲಿ ಉಳಿದಿರುವ ನೀರಿನ ಪ್ರಮಾಣವನ್ನು ಕಂಡುಹಿಡಿಯಿರಿ .
8.5 cm ವ್ಯಾಸವುಳ್ಳ ಒಂದು ಗೋಳಾಕಾರದ ಗಾಜಿನ ಪಾತ್ರೆಯು 8cm ಉದ್ದ ಮತ್ತು 2cm ವ್ಯಾಸವನ್ನು ಹೊಂದಿರುವ ಸಿಲಿಂಡರಿನ ಆಕಾರದ ಕೊರಳನ್ನು ಹೊಂದಿದೆ. ಒಂದು ಮಗುವು ಅದರಲ್ಲಿ ಹಿಡಿಯುವ ನೀರಿನ ಗಾತ್ರವನ್ನು ಅಳತೆ ಮಾಡುವುದರ ಮೂಲಕ ಅದರ ಘನಫಲವು 345 `cm^(3)` ಇದೆ ಎಂದು ಕಂಡುಕೊಳ್ಳುತ್ತಾಳೆ. ಮೇಲೆ ಕೊಟ್ಟಿರುವ ಅಳತೆಗಳು ಅದರ ಒಳಭಾಗದ ಅಳತೆಗಳು ಎಂದು ಭಾವಿಸಿ, ಅವಳ ಉತ್ತರವು ಸರಿಯಾಗಿದೆಯೇ ಎಂದು ಪರೀಕ್ಷಿಸಿ. (`pi` =3.14 ಎಂದು ತೆಗೆದುಕೊಳ್ಳಿ).
(ಬೆಲೆಯನ್ನು ನೀಡುವ ತನಕ `pi = 22/7` ಎಂದು ಪರಿಗಣಿಸ) 4.2 cm ತ್ರಿಜ್ಯವುಳ್ಳ ಲೋಹದ ಗೋಳವನ್ನು ಕರಗಿಸಿ ಅದನ್ನು 6cm ತ್ರಿಜ್ಯವಿರುವ ಸಿಲಿಂಡರಿನ ಆಕಾರದಲ್ಲಿ ಮರುರೂಪ ನೀಡಲಾಗಿದೆ. ಸಿಲಿಂಡರಿನ ಎತ್ತರವನ್ನು ಕಂಡುಹಿಡಿಯಿರಿ.
6 cm, 8 cm ಮತ್ತು 10 cm ತ್ರಿಜ್ಯಗಳನ್ನು ಹೊಂದಿರುವ ಲೋಹದ ಮೂರು ಗೋಳಗಳನ್ನು ಕರಗಿಸಿ ಓಂದು ಲೋಟದ ಗೋಳವನ್ನು ಮಾಡಿದೆ. ಹೀಗೆ ಉಂಟಾದ ನವೀನ ಗೋಳದ ತ್ರಿಜ್ಯವನ್ನು ಕಂಡುಹಿಡಿಯಿರಿ.
20m ಆಳ ಮತ್ತು 7m ವ್ಯಾಸವನ್ನು ಹೊಂದಿರುವ ಒಂದು ಬಾವಿಯನ್ನು ತೋಡಿದೆ . ಮತ್ತು ಭೂಮಿಯಿಂದ ತೆಗೆದ ಮಣ್ಣನ್ನು ಸಮವಾಗಿ ಹರಡಿ 22m `xx` 14m ವೇದಿಕೆಯನ್ನು ಮಾಡಿದೆ . ವೇದಿಕೆಯ ಎತ್ತರವನ್ನು ಕಂಡುಹಿಡಿಯಿರಿ .
20m ಆಳ ಮತ್ತು 7m ವ್ಯಾಸವನ್ನು ಹೊಂದಿರುವ ಒಂದು ಬಾವಿಯನ್ನು ತೋಡಿದೆ . ಮತ್ತು ಭೂಮಿಯಿಂದ ತೆಗೆದ ಮಣ್ಣನ್ನು ಸಮವಾಗಿ ಹರಡಿ 22m `xx` 14m ವೇದಿಕೆಯನ್ನು ಮಾಡಿದೆ . ವೇದಿಕೆಯ ಎತ್ತರವನ್ನು ಕಂಡುಹಿಡಿಯಿರಿ .
ಒಂದು ಪಾತ್ರೆಯು ನೇರ ವೃತ್ತ ಪಾದ ಸಿಲಿಂಡರಿನ ಆಕಾರದಲ್ಲಿದೆ. ಅದರ ವ್ಯಾಸ 12 cm ಮತ್ತು ಎತ್ತರ 15 cm ಇದ್ದು, ಅದರ ತುಂಬ ಐಸ್‌ಕ್ರೀಮ್ ಇದೆ. ಈ ಐಸ್‌ಕ್ರೀಮನ್ನು 12 cm ಎತ್ತರ ಮತ್ತು 6 cm ವ್ಯಾಸವಿರುವ ಶಂಕುವಿನಲ್ಲಿ, ಅದ ಮೇಲೆ ಒಂದು ಅರ್ಧಗೋಳವಿರುವಂತೆ ತುಂಬಬೇಕಾಗಿದೆ, ಈ ಐಸ್‌ಕ್ರೀಮನ್ನು ಎಷ್ಟು ಶಂಕುಗಳಲ್ಲಿ ತುಂಬಬಹುದು?
1.75cm ವ್ಯಾಸ ಹಾಗೂ 2mm , ದಪ್ಪ ಇರುವ ಬೆಳ್ಳಿ ನಾಣ್ಯಗಳಿವೆ . ಈ ನಾಣ್ಯಗಳನ್ನು ಕರಗಿಸಿ 5.5cm `xx` 10cm `xx` 3.5cm ಅಳತೆಯ ಒಂದು ಆಯತ ಘನವನ್ನು ಮಾಡಬೇಕಾಗಿದೆ . ಹಾಗಾದರೆ ಎಷ್ಟು ಬೆಳ್ಳಿಯ ನಾಣ್ಯಗಳು ಬೇಕು ?
32 cm ಎತ್ತರ ಮತ್ತು 18 cm ಪಾದದ ತ್ರಿಜ್ಯವಿರುವ ಒಂದು ಸಿಲಿ೦ಡರಿನಾಕಾರದ ಬಕೇಟ್‌ನಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಬಕೇಟ್‌ನಲ್ಲಿರುವ ಮರಳನ್ನು ಪೂರ್ತಿಯಾಗಿ ನೆಲದ ಮೇಲೆ ಸುರಿದಾಗ ಅದು ಶಂಕುವಿನಾಕಾರದ ಮರಳಿನ ರಾಶಿಯನ್ನು ಉಂಟುಮಾಡಿದೆ. ಶಂಕುವಿನಾಕಾರದ ರಾಶಿಯ ಎತ್ತರವು 24 cm ಆದರೆ, ಮರಳಿನ ರಾಶಿಯ ತ್ರಿಜ್ಯ ಹಾಗೂ ಓರೆ ಎತ್ತರವನ್ನು ಕಂಡುಹಿಡಿಯಿರಿ.
6m ಅಗಲ ಮತ್ತು 1.5m ಆಳ ಇರುವ ಕಾಲುವೆಯಲ್ಲಿ ನೀರು 10km / h . ಜವದಲ್ಲಿ ಹರಿಯುತ್ತಿದೆ . 8cm ನೀರು ನಿಲ್ಲುವ ಹಾಗೆ , 30 ನಿಮಿಷಗಳಲ್ಲಿ ಹರಿಯುವ ನೀರಿನಿಂದ ಎಷ್ಟು ಪ್ರದೇಶದ ವಿಸ್ತೀರ್ಣವನ್ನು ನೀರಾವರಿ ಮಾಡಬಹುದು ?
20cm ಒಳ ವ್ಯಾಸವನ್ನು ಹೊಂದಿರುವ ಒಂದು ಕೊಳವೆಯನ್ನು ಬಳಸಿ , ಕಾಲುವೆಯಿಂದ ತನ್ನ ಹೊಲದಲ್ಲಿರುವ 10m ವ್ಯಾಸ ಮತ್ತು 2m ಆಳ ಇರುವ ಸಿಲಿಂಡರಿನಾಕಾರದ ತೊಟ್ಟಿಗೆ ಒಬ್ಬ ರೈತ ನೀರನ್ನು ಹರಿಸಿದ್ದಾನೆ . ಕೊಳವೆಯ ಮೂಲಕ ನೀರು 3km / h , ದರದಲ್ಲಿ ಹರಿದರೆ , ತೊಟ್ಟಿ ತುಂಬಲು ತೆಗೆದುಕೊಳ್ಳುವ ಅವಧಿಯನ್ನು ಕಂಡುಹಿಡಿಯಿರಿ .
(ಬೆಲೆಯನ್ನು ನೀಡುವ ತನಕ `pi=22/7` ಎಂದು ಪರಿಗಣಿಸಿ) 14 cm ಎತ್ತರವಿರುವ ಒಂದು ಕುಡಿಯುವ ನೀರಿನ ಗಾಜಿನ ಲೋಟವು ಶಂಕುವಿನ ಭಿನ್ನಕದ ರೂಪದಲ್ಲಿದೆ. ಅದರ ಎರಡು ವೃತ್ತಾಕಾರದ ಪಾದಗಳ ವ್ಯಾಸಗಳು 4cm, ಮತ್ತು 2cm ಗಳಾಗಿವೆ. ಗಾಜಿನ ಲೋಟದ ಸಾಮಥ್ಯವನ್ನು ಕಂಡುಹಿಡಿಯಿರಿ.
ಒಂದು ಶಂಕುವಿನ ಭಿನ್ನಕದ ಓರೆ ಎತ್ತರವು 4cm ಮತ್ತು ಅದರ ವೃತ್ತಾಕಾರದ ಪಾದದ ಸುತ್ತಳತೆ ( ಪರಿಧಿ ) ಗಳು 18cm ಮತ್ತು 6cm ಶಂಕುವಿನ ಭಿನ್ನಕದ ಪಾರ್ಶ್ವ ಮೇಲೈ ವಿಸತೀರ್ಣವನ್ನು ಕಂಡುಹಿಡಿಯಿರಿ .
ಟರ್ಕಿ ದೇಶದ ಪ್ರಜೆಗಳು ಧರಿಸುವ ಟೋಪಿಗೆ 'ಫೆಜ್' ಎಂದು ಹೆಸರು. ಇದು ಶಂಕುವಿನ ಭಿನ್ನಕದ ರೂಪದಲ್ಲಿದೆ.ಅದರ ತೆರೆದ ಭಾಗದ ತ್ರಿಜ್ಯವು 10cm ಮತ್ತು ಮೇಲ್ಭಾಗದ ತ್ರಿಜ್ಯವು 4 cm ಮತ್ತು ಅದರ ಓರೆ ಎತ್ತರವು 15 cm ಆದರೆ ಅದನ್ನು ತಯಾರಿಸಲು ಉಪಯೋಗಿಸಿದ ವಸ್ತುವಿನ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
ಮೇಲ್ಬಾಗದಲ್ಲಿ ಮತ್ತು ತೆರೆದಿರುವ ಮತ್ತು ಒಂದು ಲೋಹದ ಹಾಳೆಯಿಂದ ಮಾಡಿದ ಒಂದು ಪಾತ್ರೆಯು ಶಂಕುವಿನ ಭಿನ್ನಕರ ಆಕಾರದಲ್ಲಿ ಇದೆ . ಶಂಕುವಿನ ಭಿನ್ನಕದ ಉತ್ತರ 16cm ಅದರ ಕೆಳಭಾಗದ ಮತ್ತು ಮೇಲ್ಬಾಗದ ತ್ರಿಜ್ಯಗಳು 8cm ಮತ್ತು 20cm , ಕ್ರಮವಾಗಿ ಇದೆ . ಪಾತ್ರೆಯನ್ನು ಹಾಲಿನಿಂದ ಸಂಪೂರ್ಣವಾಗಿ ತುಂಬಿಸಬೇಕಾಗಿದೆ . 1 ಲೀಟರ್ ಹಾಲಿನ ಬೆಲೆಯು Rs.20 ರಂತೆ ಹಾಲನ್ನು ಕೊಳ್ಳಲು ಎಷ್ಟು ಹಣಬೇಕು ? ಲೋಹದ ಹಾಳೆಯ ದರ Rs.8 ಪ್ರತಿ 100`cm^2` ಆದರೆ , ಇಡೀ ಪಾತ್ರೆಯನ್ನು ನಿರ್ಮಿಸಲು ಎಷ್ಟು ಹಣ ಬೇಕಾಗುತ್ತದೆ ? ( `pi`= 3.14 ಎಂದು ಪರಿಗಣಿಸಿ )
exam questions and complete solutions for chapter ಮೇಲ್ಮೈ ವಿಸ್ತೀರ್ಣಗಳು ಮತ್ತು ಘನಫಲಗಳು of CAMBRIDGE MATHS (KANNADA) of Class 10