Class 10 | MATHS |
Chapter | Question Paper June 2019 |
CAMBRIDGE PUBLICATION(KANNAD) | Example |
Number Of Questions | 45 |
Academic Year | 2023-24 |
ಒಂದು ಸಮಾಂತರ ಶ್ರೇಢಿಯ n ನೇ ಪದ `5n +3` ಆದಾಗ, ಸಮಾಂತರ ಶ್ರೇಢಿಯ 3ನೇ ಪದವು
ಚಿತ್ರದಲ್ಲಿ 'O' ಕೇಂದ್ರವುಳ್ಳ ವೃತ್ತಕ್ಕೆ PA, PC ಮತ್ತು CD ಗಳು ಸ್ಪರ್ಶಕಗಳಾಗಿವೆ. AP = 3 ಸೆಂ.ಮೀ.,
CD = 5 ಸೆಂ.ಮೀ. ಆದಾಗ PC ಯ ಉದ್ಭವು.
`a_1x + b_1y +c_1 =0` ಹಾಗೂ `a_2x + b_2y +c_2 =0` ರೂಪದ ರೇಖಾತ್ಮಕ ಸಮೀಕರಣಗಳಿಗೆ ಎಳೆದ ರೇಖೆಗಳು ಪರಸ್ಪರ ಐಕೃಗೊಂಡರೆ ಈ ಕೆಳಗಿನವುಗಳಲ್ಲಿ ಸರಿಯಾದ ಸಂಬಂಧವು..
ಮೂಲಬಿಂದು ಮತ್ತು (x, y) ನಿರ್ದೇಶಾಂಕಗಳ ನಡುವಿನ ದೂರವು
72 ಮತ್ತು 120ರ ಮ.ಸಾ.ಅ 24 ಆದರೆ, ಅವುಗಳ ಲ.ಸಾ.ಅ
`sin30^circ + cos60^circ` ಯ ಬೆಲೆಯು
ಕೊಟ್ಟರುವ ನಕ್ಷೆ `y = p(x)` ನಲ್ಲಿ ಶೂನ್ಯತೆಗಳ ಸಂಖ್ಯೆಯು.
1 ರಿಂದ 6ರವರೆಗಿನ ಸಂಖ್ಯೆಗಳನ್ನು ಹೊಂದಿರುವ ಒಂದು ಘನಾಕೃತಿಯ ದಾಳವನ್ನು ಒಂದು ಬಾರಿ ಉದರುಳಿಸಿದಾಗ, ಬೆಸ ಸಂಖ್ಯೆ ಮೇಲೆ ಬರುವ ಸಂಭವನೀಯತೆಯು,
ಒಂದು ಸಮಾಂತರ ಶ್ರೇಢಿಯ ಮೊದಲನೆ ಪದವು 'a' ಮತ್ತು ಕೊನೆಯ ಹದವು `a_n`ಆದಾಗ, ಆ ಶ್ರೇಢಿಯ ಮೊದಲ 'n' ಪದಗಳದರೆಗಿನ ಮೊತ್ತವನ್ನು ಕಂಡುಹಿಡಿಯುವ ಸೂತ್ರವನ್ನು ಬರೆಯಿರಿ.
ಎರಡು ರೇಖಾತ್ಮಕ ಸಮೀಕರಣಗಳ ಜೋಡಿಗೆ ಪರಿಹಾರ ಇರುವುದಿಲ್ಲ (ಅಸ್ಥಿರವಾಗಿದ್ದರೆ). ಆ ಸಮೀಕರಣಗಳನ್ನು ಪ್ರತಿನಿಧಿಸುವ ರೇಖೆಗಳು ಎಂತಹ ರೇಖೆಗಳಾಗಿರುತ್ತದೆ ಎಂದು ಬರೆಯಿರಿ.
ವೃತ್ತ ಕೇಂದ್ರದಲ್ಲಿ ಉಂಟಾದ ಕೋನವು `theta` ಡಿಗ್ರಿಯಾದಾಗ ತ್ರಿಜ್ಯಾಂತರ ಖಂಡದ ವಿಸ್ತೀರ್ಣವನ್ನು ಕಂಡುಹಿಡಿಯುವ ಸೂತ್ರವನ್ನು ಬರೆಯಿರಿ.
96 ನ್ನು ಅವುಗಳ ಅವಿಭಾಜ್ಯ ಅಪವರ್ತನಗಳಾಗಿ ಬರೆಯಿರಿ.
`P(x) = x^(3) + 2x^(2) -5x -6 `ಈ ಬಹುಪದೋಕ್ತಿಯ ಮಹತ್ತಮ ಘಾತ (ಡಿಗ್ರಿ)ವನ್ನು ಬರೆಯಿರಿ.
ತ್ರಿಭುಜ ABC ಯಲ್ಲಿ `/_ ABC =90^circ` ಮತ್ತು`/_ ACB =30^circ` ಆದಾಗ, AB:AC ಯನ್ನು ಕಂಡುಹಿಡಿಯಿರಿ.
ಈ ರೇಖಾತ್ಮಕ ಸಮೀಕರಣಗಳ ಜೋಡಿಗೆ ಪರಿಹಾರವನ್ನು ಕಂಡುಹಿಡಿಯಿರಿ : `x + y =14`, `x - y=4`
ABCD ಯು 14 ಸೆಂ.ಮೀ. ಬಾಹುವಿರುವ ಒಂದು ಚೌಕ. ಚಿತ್ರದಲ್ಲಿ ತೋರಿಸಿರುವಂತೆ ಇದರಲ್ಲಿ ನಾಲ್ಕು ಸರ್ವಸಮ
ವೃತ್ತಗಳನ್ನು ರಚಿಸಲಾಗಿದೆ. ಹಾಗಾದರೆ ಛಾಯೊಗೊಳಿಸಿದ ವಲಯದ ವಿಸ್ತೀರ್ಣವನ್ನು ಕಂಡುಹಿಡಿಯಿರಿ. (ವೃತ್ತಗಳು
ಒಂದನ್ನೊಂದು ಬಾಹ್ಯವಾಗಿ ಸ್ಪರ್ಶಿಸುತ್ತದೆ. ಮತ್ತು ಚೌಕದ ಬಾಹುಗಳನ್ನು ಸರ್ಶಿಸುತ್ತವೆ.)
ಕೆಳಗಿನ ಬಿಂದುಗಳ ಜೋಡಿಗಳ ನಡುವಿನ ದೂರವನು ಕಂಡುಹಿಡಿಯಿರಿ. (2,3) , (4,1)
ಶೃಂಗ ಬಿಂದುಗಳು (1, -1), (-4, 6) ಮತ್ತು (-3, -5) ಆಗಿರುವ ತ್ರಿಭುಜದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
`5 + sqrt 3` ಒಂದು ಅಭಾಗಲಬ್ಧ ಸಂಖ್ಯೆ ಎಂದು ಸಾಧಿಸಿ.
`triangle ABC cong triangle DEF` ಮತ್ತು ಅವುಗಳ ವಿಶ್ತೀರ್ಣಗಳು ಕ್ರಮವಾಗಿ 64 ಚಜರ ಸೆಂ.ಮೀ. ಮತ್ತು 100 ಚದರ ಸೆಂ.ಮೀ.ಗಳಾಗಿದ್ದು. EF= 12 ಸೆಂ.ಮೀ. ಆದಾಗ BC ಯ ಅಳತೆಯನ್ನು ಕಂಡುಹಿಡಿಯಿರಿ.
6m ಎತ್ತರದ ನೇರವಾದ ಕಂಬವು ನೆಲದ ಮೇಲೆ 4m ಉದ್ದದ ನೆರಳನ್ನು ಉಂಟುಮಾಡುತ್ತದೆ. ಅದೇ ಸಮಯದಲ್ಲಿ ಒಂಡು ಕಟ್ಟಡವು 28 ಮೀಟರ್ ಉದ್ದದ ನೆರಳನ್ನು ಉಂಟುಮಾಡುತ್ತದೆ ಹಾಗಾದರೆ ಆ ಕಟ್ಟಡದ ಎತ್ತರವೇನು?
ಚಿತ್ರದಲ್ಲಿ ತೋರಿಸಿರುವಂತೆ ABCD ಒಂದು ಸಮಾಂತರ ಚತುರ್ಭುಜ. BC ಯ ಮೇಲೆ 'E' ಒಂದು ಬಿಂದು,
ಕರ್ಣ BD ಯು AE ಯನ್ನು 'F' ನಲ್ಲಿ ಛೇದಿಸುತ್ತದೆ. ಹಾಗಾದರೆ DF x EF = FB x FA ಎಂದು ಸಾಧಿಸಿ.
ಒಂದು ವರ್ಗ ಬಹುಪದೋಕ್ತಿ `P(x) = ax^(2) +bx -4` ರ ಶೂನ್ಯತೆಗಳ ಮೊತ್ತ ಮತ್ತು ಗುಣಲಬ್ಬಗಳು ಕ್ರಮವಾಗಿ `1/4` ಮತ್ತು -1 ಆಗಿದೆ. ಹಾಗಾದರೆ a ಮತ್ತು b ಗಳ ಬೆಲೆಯನ್ನು . ಕಂಡುಹಿಡಿಯಿರಿ.
`P(x) = 2x^(2) + 3x +1`ನ್ನು `g(x) = x+2` ರಿಂದ ಭಾಗಿಸಿದಾಗ ಬರುವ ಭಾಗಲಬ್ಧ ಮತ್ತು ಶೇಷವನ್ನು ಕಂಡುಹಿಡಿಯಿರಿ.
k ನ ಯಾವ ಬೆಲೆಗೆ ಬಹುಪದೋಕ್ತಿ `P(x) = x^(2) -x -(2k +2)` ರ ಒಂದು ಶೂನ್ಯತೆಯು -4 ಆಗಿರುತ್ತದೆ ಎಂದು ಕಂಡುಹಿಡಿಯಿರಿ.
` x^(2) - 3x - 10 =0` ಸಮೀಕರಣವನ್ನು ಸೂತ್ರದ ಸಹಾಯದಿಂದ ಬಿಡಿಸಿ.
`cosec theta = 13/12` ಆದರೆ, `cos theta` ದ ಬೆಲೆಯನ್ನು ಕಂಡುಹಿಡಿಯಿರಿ.
`(tanA xx sinA) + cosA = secA` ಎಂದು ತೋರಿಸಿ.
ಒಂದು ಪೆಟ್ಟಿಗೆಯಲ್ಲಿ 1 ರಿಂದ 90 ರರೆಗಿನ ಸಂಖ್ಯೆಗಳು ನಮೂದಾಗಿರುವ 90 ಬಿಲ್ಲೆಗಳಿವೆ. ಪೆಟ್ಟಿಗೆಯಿಂದ ಒಂದು ಬಿಲ್ಲೆಯನ್ನು ಯಾದೃಚ್ಛಿಕವಾಗಿ ತೆಗೆದರೆ ಅದು ಒಂದು ಪೂರ್ಣ ವರ್ಗ ಸಂಖ್ಯೆ ಯನ್ನು ಹೊಂದಿರುವ ಸಂಬವನೀಯತೆಯನ್ನು ಕಂಡುಹಿಡಿಯಿರಿ.
9 ಸೆಂ.ಮೀ. ತ್ರಿಜ್ಯವುಳ್ಳ ಲೋಹದ ಗೋಳವನ್ನು ಕರಗಿಸಿ ಅದನ್ನು 6 ಸೆಂ.ಮೀ. ತ್ರಿಜ್ಯವಿರುವ ಸಿಲಿಂಡರಿನ ಆಕಾರದಲ್ಲಿ ಮರುರೂಪ ನೀಡಲಾಗಿದೆ. ಹಾಗಾದರೆ ಸಿಲಿಂಡರಿನ ಎತ್ತರವನ್ನು ಕಂಡುಹಿಡಿಯಿರಿ.
64 `cm^3` ಘನಫಲವನ್ನು ಹೊಂದಿರುವ 2 ವರ್ಗ ಘನಗಳ ಮುಖಗಳನ್ನು ಸೇರಿಸಿ ಒಂದು ಆಯತ ಘನಾಕೃತಿ ಮಾಡಿದೆ . ಈ ಆಯತ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ .
ಬಾಹ್ಯ ಬಿಂದುವಿನಿಂದ ವೃತ್ತಕ್ಕೆ ಎಳೆದ ಸ್ಪರ್ಶಕಗಳ ಉದ್ದವು ಸಮನಾಗಿರುತ್ತದೆ". ಎಂದು ಸಾಧಿಸಿ.
ಎರಡು ಏಕಕೇಂದ್ರಿಯ ವೃತ್ತಗಳ ತ್ರಿಜ್ಯಗಳು 5cm ಮತ್ತು 3 cm ಆಗಿವೆ. ಚಿಕ್ಕ ವೃತ್ತಕ್ಕೆ ಸ್ಪರ್ಶಿಸುವಂತೆ ದೊಡ್ಡ ವೃತ್ತದ ಜ್ಯಾದ ಉದ್ದವನ್ನು ಕಂಡುಹಿಡಿಯಿರಿ.
ಈ ಕೆಳಗಿನ ಆವೃತ್ತಿ ವಿತರಣಾ ಪಟ್ಟಿಯಲ್ಲಿರುವ ದತ್ತಾಂಶಗಳಿಗೆ ಬಹುಲಕವನ್ನು ಕಂಡುಹಿಡಿಯಿರಿ :
ಈ ಕೆಳಗಿನ ಆವೃತ್ತಿ ವಿತರಣಾ ಪಟ್ಟಿಯಲ್ಲಿರುವ ದತ್ತಾಂಶಗಳಿಗೆ ಮಧ್ಯಾಂಕವನ್ನು ಕಂಡುಹಿಡಿಯಿರಿ ,
ಸಮತಟ್ಟಾದ ನೆಲದ ಮೇಲೆ `50 sqrt 3` ಮೀಟರ್ ಎತ್ತರದಲ್ಲಿರುವ ಒಂದು ನೇರ ಕಟ್ಟಡದ ಮೇಲಿನಿಂದ ಅದೇ ನೆಲದ ಮೇಲಿರುವ ಒಂದು ವಸ್ತುವನ್ನು ನೋಡಿದಾಗ ಉಂಟಾದ ಅವನತ ಕೋಪವು `60^circ` ಆಗಿರುತ್ತದೆ. ಹಾಗಾದರೆ ಕಟ್ಟಡದ ಬುಡದಿಂದ ವಸ್ತುವಿಗಿರುವ ದೂರವನ್ನು ಕಂಡುಹಿಡಿಯಿರಿ.
ಒಂದು ಜಮೀನಿನ ಎರಡೂ ಕಡೆ 50. ಮೀಟರ್ ಮತ್ತು `40 sqrt3` ಮೀಟರ್. ಎತ್ತರವಿರುವ ಎರಡು ಗಾಳಿ
ಯಂತ್ರಗಳಿವೆ. ಆ ಎರಡೂ ಗಾಳಿಯಂತ್ರಗಳ ನಡುವೆ ನಿಂತಿರುವ ಒಬ್ಬ ವ್ಯಕ್ತಿಯು ಅವುಗಳ ತುದಿಯನ್ನು ವೀಕ್ಷಿಸಿದಾಗ
ಉಂಟಾದ ಉನ್ನತ ಕೋನವು `45^circ` ಮತ್ತು `30^circ` ಆಗಿರುತ್ತದೆ. ಹಾಗಾದರೆ ಈ ಗಾಳಿಯಂತ್ರಗಳ ನಡುವಿನ ದೂರವನ್ನು
ಕಂಡುಹಿಡಿಯಿರಿ.
ಒಂದು ಗ್ರಾಮದ 100 ಹೊಲಗಳಲ್ಲಿ ಪ್ರತಿ ಹೆಕ್ಟೇರ್‌ಗೆ ಉತ್ಪಾದಿಸುವ ಗೋಧಿಯ ಇಳುವರಿಯನ್ನು ಕೆಳಗಿನ ಕೋಷ್ಟಕವು
ನೀಡುತ್ತಿದೆ :ಈ ವಿತರಣೆಯನ್ನು 'ಅಧಿಕ ಇರುವ ವಿಭಾನದ' ವಿತರಣೆಯಾಗಿ ಬದಲಾಯಿಸಿ, ಇದರ -ಓಜೀವ್ ಎಳೆಯಿರಿ.
12 ಸೆಂ.ಮೀ. ಪಾದದ ತ್ರಿಜ್ಯ ಹಾಗೂ 20 ಸೆಂ.ಮೀ. ಎತ್ತರ ಇರುವ ಶಂಕುವಿನ ಮೇಲ್ಭಾಗದಿಂದ ಪಾದದ
ತ್ರಿಜ್ಯ 3 ಸೆಂ.ಮೀ. ಇರುವಂತೆ ಒಂದು ಸಣ್ಣ ಶಂಕುವನ್ನು ಕತ್ತರಿಸಿ ತೆಗೆಯಲಾಗಿದೆ. ಹೀಗೆ ಉಂಟಾದ ಶಂಕುವಿನ
ಭಿನ್ನಕದ ಘನಫಲವನ್ನು ಕಂಡುಹಿಡಿಯಿರಿ.
ಚಿತ್ರದಲ್ಲಿ ತೋರಿಸಿರುವಂತೆ ಸಿಲಿಂಡರಿನ ಎರಡೂ ಬದಿಗಳಲ್ಲಿ ಸಮತ್ರಿಜ್ಯವಿರುವ ಅರ್ಧಗೋಳಗಳನ್ನು
ಜೋಡಿಸಿರುವ ಆಕಾರದಲ್ಲಿ ಒಂದು ಹಾಲಿನ ಟ್ಯಾಂಕನ್ನು ನಿರ್ಮಿಸಲಾಗಿದೆ. ಈ ಟ್ಯಾಂಕ್‌ನ ಒಟ್ಟು ಎತ್ತರ 6
ಮೀಟರ್ ಮತ್ತು ತ್ರಿಜ್ಯ 1 ಮೀಟರ್ ಆಗಿದ್ದರೆ, ಈ ಟ್ಯಾಂಕಿನಲ್ಲಿ ತುಂಬಬಹುದಾದ ಗರಿಷ್ಟ ಹಾಲಿನ
ಪ್ರಮಾಣವನ್ನು ಲೀಟರ್‌ಗಳಲ್ಲಿ ಕಂಡುಹಿಡಿಯಿರಿ. (`pi` =22/7)
ಒಂದು ಸಮಾಂತರ ಶ್ರೇಢಿಯ 4ನೇ ಮತ್ತು 8ನೇ ಪದಗಳ ಮೊತ್ತ 24 ಮತ್ತು 6ನೇ ಮತ್ತು 10ನೇ ಪದಗಳ ಮೊತ್ತ 44ಆದರೆ ಆ ಶ್ರೇಢಿಯ ನೊದಲ ಮೂರು ಪಪದಗಳನ್ನು ಕಂಡುಹಿಡಿಯಿರಿ
"ಓಂದು ಲಂಬಕೋನ ತ್ರಿಭುಜದಲ್ಲಿ ವಿಕರ್ಣದ ಮೇಲಿನ ನ ವರ್ಗವು ಉಳಿದೆರಡು ಬಾಹುಗಳ ಮೇಲಿನ ವರ್ಗಗಳ ಮೊತ್ತಕ್ಕೆ ಸಮನಾಗಿರುತ್ತವೆ'' ಎಂದು ಸಾಧಿಸಿ.
ನಕ್ಷೆಯ ಕ್ರಮದಿಂದ ಬಿಡಿಸಿ : `2x + y =8` `x -y =1`
A ಮತ್ತು B ಎಂಬ ಇಬ್ಬರು ವಿದ್ಯಾರ್ಥಿಗಳ ವಯಸ್ಸು ಕ್ರಮವಾಗಿ 19 ವರ್ಷಗಳು ಮತ್ತು 15 ವರ್ಷಗಳಾಗಿವೆ. ಎಷ್ಟು ವರ್ಷಗಳ ನಂತರ ಇವರಿಬ್ಬರ ವಯಸ್ಸುಗಳ ಗುಣಲಬ್ಧವೆ 480 ಆಗುತ್ತದೆ ಎಂದು ಕಂಡುಹಿಡಿಯಿರಿ.
`(b-c) x^(2) +(c-a)x + (a-b)` = 0 ಸಮೀಕರಣದ ಮೂಲಗಳು ಸಮನಾಗಿದ್ದರೆ 2b = a+c ಎಂದು ಸಾಧಿಸಿ.
Example questions and complete solutions for chapter Question Paper June 2019 of CAMBRIDGE MATHS (KANNADA) of Class 10